ಕೊಚ್ಚಿ: ರಾಜ್ಯದಲ್ಲಿ ಏಡ್ಸ್ ನಿಯಂತ್ರಣ ಸೊಸೈಟಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 62 ಎಚ್ ಐವಿ ಪರೀಕ್ಷಾ ಕೇಂದ್ರಗಳನ್ನು ಮುಚ್ಚಲಾಗಿದೆ.
ವೈದ್ಯಕೀಯ ಕಾಲೇಜುಗಳು, ಜಿಲ್ಲಾ-ತಾಲೂಕು ಆಸ್ಪತ್ರೆಗಳು, ಕೇಂದ್ರ ಕಾರಾಗೃಹಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈ ಕೇಂದ್ರಗಳಿದ್ದವು.
ಕೋಝಿಕ್ಕೋಡ್ ಜಿಲ್ಲೆಯಲ್ಲಿ ಅತಿ ಹೆಚ್ಚು ತಪಾಸಣಾ ಕೇಂದ್ರಗಳಿದ್ದವು. ಜಿಲ್ಲೆಯಲ್ಲಿ ಒಂಬತ್ತು ಕೇಂದ್ರಗಳು ಮುಚ್ಚುಗಡೆಗೊಂಡಿದೆ.
ಎಚ್ಐವಿ ಪ್ರಮಾಣ ಕಡಿಮೆ ಇರುವ ಕಾರಣ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹೇಳಿದೆ.
ಈ ಕೇಂದ್ರಗಳಲ್ಲಿ ಎಚ್‍ಐವಿ ಪರೀಕ್ಷೆ ಮತ್ತು ಸಮಾಲೋಚನೆ ನಡೆಸಲಾಗುತ್ತಿತ್ತು. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ಅಡಿಯಲ್ಲಿ 150 ಎಚ್‍ಐವಿ ಪರೀಕ್ಷಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದವು.