ನವದೆಹಲಿ: ಬಿಜೆಪಿ ಸರ್ಕಾರವು ಕೃಷಿ ಕ್ಷೇತ್ರ ಮತ್ತು ರೈತರ ಕಲ್ಯಾಣಕ್ಕಾಗಿ ವಾರ್ಷಿಕ ₹6.5 ಲಕ್ಷ ಕೋಟಿ ಹಣವನ್ನು ವ್ಯಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು. ಅಡುಗೆ ಎಣ್ಣೆ ವಿಚಾರದಲ್ಲಿ ದೇಶವನ್ನು ಸ್ವಾವಲಂಬಿಯಾಗಿಸಲು ಸಹಕಾರಿ ಸಂಸ್ಥೆಗಳು ಸಹಾಯ ಮಾಡಬೇಕೆಂದು ಕರೆ ನೀಡಿದರು.

ಅಂತರರಾಷ್ಟ್ರೀಯ ಸಹಕಾರಿ ದಿನದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಪಿಎಂ ಕಿಸಾನ್ ಯೋಜನೆ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾರ್ಯಾಚರಣೆಗಳು ಮತ್ತು ರಸಗೊಬ್ಬರ ಸಬ್ಸಿಡಿಯಂತಹ ಯೋಜನೆಗಳ ಬಗ್ಗೆ ಶ್ಲಾಘಿಸಿದರು.
ಕಳೆದ 9 ವರ್ಷಗಳಲ್ಲಿ ರೈತರ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಖರೀದಿಸುವ ಮೂಲಕ ₹15 ಲಕ್ಷ ಕೋಟಿ ಹಣವನ್ನು ರೈತರಿಗೆ ನೀಡಲಾಗಿದೆ. ಕಳೆದ ವರ್ಷ ರಸಗೊಬ್ಬರ ಸಬ್ಸಿಡಿಗೆ ₹10 ಲಕ್ಷ ಕೋಟಿ ಹಣವನ್ನು ಸರ್ಕಾರ ಖರ್ಚು ಮಾಡಿದೆ ಎಂದು ಮೋದಿ ಹೇಳಿದರು.
'ಸರ್ಕಾರವು ಕೃಷಿ ಮತ್ತು ರೈತರಿಗಾಗಿ ವರ್ಷಕ್ಕೆ ಸುಮಾರು ₹6.5 ಲಕ್ಷ ಕೋಟಿ ಹಣವನ್ನು ಖರ್ಚು ಮಾಡುತ್ತಿದೆ. ಪ್ರತಿ ವರ್ಷ ರೈತರಿಗೆ ವಿವಿಧ ರೀತಿಯಲ್ಲಿ ₹50,000 ನೀಡುತ್ತಿರುವುದು ಖಾತ್ರಿಯಾಗಿದೆ. ಇದು ಮೋದಿ ಗ್ಯಾರಂಟಿಯಾಗಿದೆ. ನಮ್ಮ ಸರ್ಕಾರ ಏನು ಮಾಡಿದೆ ಎಂಬುವುದರು ಬಗ್ಗೆ ಮಾತನಾಡುತ್ತಿದ್ದೇನೆಯೇ ಹೊರತು, ಭರವಸೆಗಳ ಬಗ್ಗೆ ಮಾತನಾಡುತ್ತಿಲ್ಲ' ಎಂದು ಮೋದಿ ಹೇಳಿದರು.
ಕಳೆದ 4 ವರ್ಷಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ₹2.5 ಲಕ್ಷ ಕೋಟಿ ಹಣವನ್ನು ಜಮೆ ಮಾಡಲಾಗಿದೆ ಎಂದು ಮೋದಿ ಹೇಳಿದರು.