ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 7 ರೂ.ಗಳಷ್ಟು ಹೆಚ್ಚಿಸಿವೆ.
ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,773 ರೂ.ನಿಂದ 1,780 ರೂ.ಗೆ ಏರಿಕೆಯಾಗಿದೆ. ಆದಾಗ್ಯೂ, ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಮುಂಬೈನಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ 1,733.50 ರಿಂದ 1,740.50 ಕ್ಕೆ ಏರಿಕೆಯಾಗಿದ್ದು, ಚೆನ್ನೈನಲ್ಲಿ ಇದು 1,945 ರಿಂದ 1,952ಕ್ಕೆ ಮತ್ತು ಕೋಲ್ಕತ್ತಾದಲ್ಲಿ 1,895 ರಿಂದ 1,902 ಕ್ಕೆ ಏರಿಕೆಯಾಗಿದೆ.
ಕಳೆದ ಮೇ ಮತ್ತು ಜೂನ್‌ನಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಸತತ ಎರಡು ಬಾರಿ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 172 ರೂಪಾಯಿಗಳಷ್ಟು ಕಡಿಮೆಗೊಳಿಸಿದರೆ, ಜೂನ್‌ನಲ್ಲಿ 83 ರೂಪಾಯಿ ಇಳಿಕೆಯಾಗಿತ್ತು.