ನವದೆಹಲಿ: ಭಾರತೀಯ ಹವಾಮಾನ ಇಲಾಖೆ (India Meteorological Department) ಹೊಸ ವರದಿಯೊಂದನ್ನು ಅಧಿಕೃತವಾಗಿ ಪ್ರಕಟಿಸಿದ್ದು, 7 ರಾಜ್ಯಗಳಿಗೆ ಆರೆಂಜ್ ಅಲರ್ಟ್ ನೀಡುವ ಮೂಲಕ ಭಾರಿ ಮಳೆಯ ಮುನ್ಸೂಚನೆಯನ್ನು ತಿಳಿಸಿದೆ.
ನವದೆಹಲಿ: ಭಾರತೀಯ ಹವಾಮಾನ ಇಲಾಖೆ (India Meteorological Department) ಹೊಸ ವರದಿಯೊಂದನ್ನು ಅಧಿಕೃತವಾಗಿ ಪ್ರಕಟಿಸಿದ್ದು, 7 ರಾಜ್ಯಗಳಿಗೆ ಆರೆಂಜ್ ಅಲರ್ಟ್ ನೀಡುವ ಮೂಲಕ ಭಾರಿ ಮಳೆಯ ಮುನ್ಸೂಚನೆಯನ್ನು ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ವರದಿಯ ಅನುಸಾರ, ಏಳು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, 115.6 ರಿಂದ 204.4 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿದೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಜಾರ್ಖಂಡ್, ಒಡಿಶಾ ಮತ್ತು ಛತ್ತೀಸ್‌ಗಢ ರಾಜ್ಯಗಳಿಗೆ ಈ ಎಚ್ಚರಿಕೆ ಅನ್ವಯಸಲಿದೆ. ಈ ಪ್ರದೇಶಗಳಲ್ಲಿನ ನಿವಾಸಿಗಳು ಮಳೆಯಿಂದ ಉಂಟಾಗುವ ತೊಂದರೆಗಳಿಂದ ಮುನ್ನೆಚ್ಚರಿಕೆ ವಹಿಸಲು ಪ್ರತ್ಯೇಕವಾಗಿ ತಿಳಿಸಿದೆ.