ಕಾಸರಗೋಡು : ಆಲುವಾದಲ್ಲಿ ಐದರ ಹರೆಯದ ಬಾಲಕಿಯ ಬರ್ಬರ ಹತ್ಯೆ ಖಂಡಿಸಿ ಮಹಿಳಾ ಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ತಾಲೂಕು ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿತು.
ಬಿಜೆಪಿ ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷೆ ಪ್ರಮೀಳಾ ಮಜಲ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷೆ ಪುಷ್ಪಾ ಗೋಪಾಲನ್ ಅಧ್ಯಕ್ಷ ತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉಮಾ ಕಡಪ್ಪುರ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಶ್ರೀಲತಾ, ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಗೋಪಾಲಕೃಷ್ಣ, ಉಪಾಧ್ಯಕ್ಷೆ ಸ್ಮಿಜಾ, ಬಿಜೆಪಿ ಘಟಕ ಪ್ರಧಾಣ ಕಾರ್ಯದರ್ಶಿ ಸುಕುಮಾರ್ ಕುದುರೆಪ್ಪಾಡಿ ಉಪಸ್ಥಿತರಿದ್ದರು. ಮಹಿಳಾ ಮೋರ್ಚಾ ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ರಬಿತಾ ರತೀಶ್ ವಂದಿಸಿದರು.