ಪಟ್ನಾ : ರಾಜ್ಯ ಸರ್ಕಾರದ ವಿರುದ್ಧ ಗುರುವಾರ ಇಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟಿದ್ದು, ಪೊಲೀಸರು ನಡೆಸಿದ ಲಾಠಿ ಪ್ರಹಾರದಿಂದ ಇವರು ಮೃತರಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಪಟ್ನಾ : ರಾಜ್ಯ ಸರ್ಕಾರದ ವಿರುದ್ಧ ಗುರುವಾರ ಇಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟಿದ್ದು, ಪೊಲೀಸರು ನಡೆಸಿದ ಲಾಠಿ ಪ್ರಹಾರದಿಂದ ಇವರು ಮೃತರಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಜೆಹನಾಬಾದ್ ಜಿಲ್ಲೆಯ ಬಿಜೆಪಿ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ವಿಜಯ್ ಸಿಂಗ್ ಮೃತಪಟ್ಟವರು.
ರಾಜ್ಯ ಸರ್ಕಾರದ ಶಿಕ್ಷಕರ ನೇಮಕಾತಿ ನೀತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬಿಜೆಪಿ ವಿಧಾನಸಭೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿತ್ತು.
'ವಿಜಯ್ ಅವರು ಪ್ರತಿಭಟನೆ ವೇಳೆ ಮೃತಪಟ್ಟಿದ್ದಾರೆ' ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ.
'ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿ ಪ್ರಹಾರದಲ್ಲಿ ಹಲವು ಮಂದಿ ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ' ಎಂದೂ ಅವರು ವಿವರಿಸಿದ್ದಾರೆ.
ವಿಜಯ್ ಅವರ ದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.