ಲಖನೌ: ವಿಶೇಶ್ವರ್‌ಗಂಜ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿಕೊಂಡಿದ್ದ ಆತನನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಶೇಶ್ವರ್‌ಗಂಜ್ ಬ್ಲಾಕ್‌ನಲ್ಲಿರುವ ಶಿವಪುರ ಬೈರಾಗಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದುರ್ಗಾ ಪ್ರಸಾದ್ ಜೈಸ್ವಾಲ್ ಕುಡಿದ ಅಮಲಿನಲ್ಲಿ ಶಾಲೆಯ ತರಗತಿಯಲ್ಲಿ ಬೆತ್ತಲೆಯಾಗಿ ಮಲಗಿರುವುದು ವೀಡಿಯೊದಲ್ಲಿ ಕಾಣಬಹುದು. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಮುಜುಗರ ಎದುರಿಸಬೇಕಾಗಿದೆ.
ವೈರಲ್ ಆಗಿರುವ ವಿಡಿಯೋದ ಸತ್ಯಾಸತ್ಯತೆ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಪಗೊಂಡ ಪೋಷಕರು ಮತ್ತು ಗ್ರಾಮಸ್ಥರು 'ಜೈಸ್ವಾಲ್ ಆಗಾಗ್ಗೆ ವಿದ್ಯಾರ್ಥಿಗಳ ಮುಂದೆ ಅಶ್ಲೀಲ ಕೃತ್ಯಗಳಲ್ಲಿ ತೊಡಗುತ್ತಾರೆ' ಎಂದು ಆರೋಪಿಸಿದ್ದಾರೆ. ಮುಖ್ಯೋಪಾಧ್ಯಾಯರು ತರಗತಿಯಲ್ಲಿ ತಮ್ಮ ಬಟ್ಟೆಗಳನ್ನು ತೆಗೆದು ವಿಶ್ರಾಂತಿ ಪಡೆಯುತ್ತಾರೆ. ಈ ಚೇಷ್ಟೆಗಳಿಂದ ಮುಜುಗರಕ್ಕೊಳಗಾದ ವಿದ್ಯಾರ್ಥಿನಿಯರು ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದರು.
ದೂರಿನ ಅನ್ವಯ ಪ್ರಾಥಮಿಕ ಶಿಕ್ಷಣಾಧಿಕಾರಿ (ಬಿಎಸ್‌ಎ) ಶಿಕ್ಷಣಾಧಿಕಾರಿಯಿಂದ ತನಿಖೆಗೆ ಆದೇಶಿಸಿದ್ದಾರೆ. ಬಳಿಕ ಜೈಸ್ವಾಲ್ ಅವರನ್ನು ಅಮಾನತುಗೊಳಿಸಲಾಗಿದೆ.
ಬಿಎಸ್‌ಎ ಅವ್ಯಕ್ತ್ ರಾಮ್ ತಿವಾರಿ, 'ವಿಶೇಶ್ವರಗಂಜ್ ಬ್ಲಾಕ್‌ನ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಿವಪುರ ಬೈರಾಗಿ ಮೂಲ ಶಾಲೆಯ ಮುಖ್ಯೋಪಾಧ್ಯಾಯ ದುರ್ಗಾ ಪ್ರಸಾದ್ ಜೈಸ್ವಾಲ್ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಾರೆ ಎಂದು ನಮಗೆ ದೂರು ಬಂದಿತ್ತು. ಇತ್ತೀಚೆಗೆ ಇದರ ವೀಡಿಯೊ ಕೂಡ ಹೊರಬಿದ್ದಿದೆ. ಆದರೆ, ವೀಡಿಯೋವನ್ನು ಇನ್ನೂ ಪರಿಶೀಲಿಸಲಾಗಿಲ್ಲ. ಜುಲೈ 24ರಂದು ಪ್ರಾಥಮಿಕ ಶಿಕ್ಷಣಾಧಿಕಾರಿ ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ಹೇಳಿದರು.