HEALTH TIPS

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ನಾಲ್ವರ ಬಂಧನ- ಆರೋಪಿ ಮನೆಗೆ ಬೆಂಕಿ

Top Post Ad

Click to join Samarasasudhi Official Whatsapp Group

Qries

Qries

              ಇಂಫಾಲ: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಗುಂಪಿನಲ್ಲಿದ್ದ ವ್ಯಕ್ತಿ ಮತ್ತು ಮಹಿಳೆಯರನ್ನು ಎಳೆದೊಯುತ್ತಿದ್ದ ವ್ಯಕ್ತಿ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

               ಗುರುವಾರ ಸಂಜೆ ಹೊತ್ತಿಗೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದರು. ಕೆಲವು ಗಂಟೆಗಳ ನಂತರ, ಇನ್ನೂ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

                ಮೇ 4ರಂದು ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೊ ಬುಧವಾರದಿಂದ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಬಂಧಿತನಾದ ಮೊದಲ ವ್ಯಕ್ತಿಯನ್ನು ಹುಯಿರೆಮ್ ಹೆರದಾಶ್ ಸಿಂಗ್ ಎಂದು ಗುರುತಿಸಲಾಗಿದ್ದು, ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕುಕೃತ್ಯ ಎಸಗಲು ದುಷ್ಕರ್ಮಿಗಳ ಗುಂಪಿಗೆ ನಿರ್ದೇಶನ ನೀಡಿರುವುದು ಬುಧವಾರ ಬಯಲಾದ ವಿಡಿಯೊದಲ್ಲಿ ಕಂಡಬಂದಿದೆ. ಬಂಧಿತ ಇತರ ಮೂವರು ವ್ಯಕ್ತಿಗಳ ಗುರುತು ತಕ್ಷಣಕ್ಕೆ ಪತ್ತೆಯಾಗಿಲ್ಲ.

                   ಹಿರಿಯ ಅಧಿಕಾರಿಗಳು ವಿಡಿಯೊವನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದು, ಬಂಧಿತ ವ್ಯಕ್ತಿಗಳು ಮತ್ತು ವಿಡಿಯೊದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಗಳ ಸಾಮ್ಯತೆ ಪರಿಶೀಲನೆ ನಡೆಸುತ್ತಿದ್ದಾರೆ.

ವಿಡಿಯೊ ಬಯಲಾಗುತ್ತಿದ್ದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗುರುವಾರ ರಾತ್ರಿ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಇತರೆ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

                    ಹಿರಿಯ ಐಪಿಎಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಡೆದ ರಾತ್ರಿ ಕಾರ್ಯಾಚರಣೆಯಲ್ಲಿ, 32 ವರ್ಷದ ಆರೋಪಿ ಹುಯಿರೆಮ್ ಹೆರದಾಶ್ ಸಿಂಗ್‌ನನ್ನು ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ.

              ದುಷ್ಕರ್ಮಿಗಳ ಗುಂಪು ಮಹಿಳೆಯರನ್ನು ಬಿಡುಗಡೆ ಮಾಡುವ ಮೊದಲು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ನಡುವೆ, ಗ್ರಾಮಸ್ಥರು, ಬಂಧಿತ ಆರೋಪಿ ಹೆರದಾಶ್ ಸಿಂಗ್ ಅವರ ಮನೆಗೆ ಬೆಂಕಿ ಹಚ್ಚಿದ್ದು, ಕುಟುಂಬವನ್ನು ಬಹಿಷ್ಕರಿಸಿದ್ದಾರೆ.

                 ಇದೊಂದು 'ಅಮಾನವೀಯ' ಕೃತ್ಯ ಎಂದಿರುವ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, ಅಪರಾಧಿಗಳು ಗರಿಷ್ಠ ದಂಡನೆಗೆ ಅರ್ಹರು ಎಂದು ಹೇಳಿದ್ದಾರೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries