ಕಾಸರಗೋಡು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಒಂಬತ್ತನೇ ವರ್ಷಾಚರಣೆ ಅಂಗವಾಗಿ ಬಿಜೆಪಿ ನೇತೃತ್ವದಲ್ಲಿ ಕಾಸರಗೋಡು ನಗರದಲ್ಲಿ ಮಹಾ ಸಂಪರ್ಕ ಅಭಿಯಾನ ನಡೆಯಿತು.ಕೇಂದ್ರ ಮುಖಂಡ ಎ.ಪಿ.ಅಬ್ದುಲ್ಲ ಕುಟ್ಟಿ ಚಾಲನೆ ನೀಡಿದರು.
ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಅಭಿವೃದ್ಧಿ ಯೋಜನೆಗಳ ಮಾಹಿತಿ ಒಳಗೊಂಡ ಕರಪತ್ರಗಳನ್ನು ನಗರದ ಆಟೋ ಕಾರ್ಮಿಕರು, ಸಾರ್ವಜನಿಕರು, ವಿವಿಧ ಅಂಗಡಿಗಳ ಮಾಲೀಕರು ಹಾಗೂ ನೌಕರರಿಗೆ ವಿತರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರವಿಶತಂತ್ರಿ ಕುಂಟಾರ್, ಕಾರ್ಯದರ್ಶಿ ಉಮಾ ಕಡಪ್ಪುರಂ, ರಾಜ್ಯ ಪರಿಷತ್ ಸದಸ್ಯೆ ಸವಿತಾ ಟೀಚರ್, ಎಸ್‍ಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಂಪತ್ ಕುಮಾರ್, ಬಿಜೆಪಿ ಕಾಸರಗೋಡು ಮಂಡಲ ಅಧ್ಯಕ್ಷೆ ಪ್ರಮೀಳಾ ಮಜಾಲ್, ಸಾರ್ವಜನಿಕ ಕಾರ್ಯದರ್ಶಿ ಸುಕುಮಾರ್ ಕುದುರೆಪ್ಪಾಡಿ, ಮಹಿಳಾ ಮೋರ್ಚಾ ಜಿಲ್ಲಾ ಖಜಾಂಚಿ ವೀಣಾ ಅರುಣ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.