ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉಭಯ ಸದನಗಳಲ್ಲಿ ಗದ್ದಲದ ನಡುವೆ ವಿರೋಧ ಪಕ್ಷಗಳ ಒಕ್ಕೂಟ 'ಇಂಡಿಯಾ', ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉಭಯ ಸದನಗಳಲ್ಲಿ ಗದ್ದಲದ ನಡುವೆ ವಿರೋಧ ಪಕ್ಷಗಳ ಒಕ್ಕೂಟ 'ಇಂಡಿಯಾ', ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ.
ಮಂಗಳವಾರ ಬೆಳಿಗ್ಗೆ ನಡೆದ ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ (INDIA) ಸಭೆಯಲ್ಲಿ ನೋಟಿಸ್ ಸಲ್ಲಿಸುವ ಪ್ರಸ್ತಾಪವನ್ನು ಚರ್ಚಿಸಲಾಗಿದೆ. ಮಣಿಪುರ ವಿಷಯದ ಬಗ್ಗೆ ಚರ್ಚೆಯನ್ನು ಪ್ರಾರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಇದು ಪರಿಣಾಮಕಾರಿ ಮಾರ್ಗವಾಗಿದೆ ಎಂದು ವಿಪಕ್ಷಗಳು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ.
ಮಣಿಪುರದ ವಿಚಾರದಲ್ಲಿ ಸರ್ಕಾರವನ್ನು ರಾಜ್ಯಸಭೆಯಲ್ಲೂ ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ನಿರ್ಧರಿಸಿವೆ.
ವಿರೋಧ ಪಕ್ಷಗಳ ನಡೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ 'ನನಗೆ ಅವರ ನಡೆಯ ಬಗ್ಗೆ ತಿಳಿದಿಲ್ಲ ಆದರೆ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಮಂಡಿಸುವ ಯೋಚನೆಯಲ್ಲಿದ್ದರೆ, ಕಳೆದ ಬಾರಿ ಅವಿಶ್ವಾಸ ನಿರ್ಣಯ ಮಂಡಿಸಿದಾಗ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳ ಪ್ರಬಲ ಬಹುಮತ ಪಡೆಯುವ ಮೂಲಕ ಗೆಲುವು ಸಾಧಿಸಿತ್ತು. ಮತ್ತೆ ಅದು ಪುನಾರವರ್ತಿಸಲಿದೆ ಆದರೆ ಈ ಭಾರಿ ನಾವು 350ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎಂಬುದು ಅವರಿಗೆ ತಿಳಿದಿರಬೇಕು ಎಂದು ಹೇಳಿದ್ದಾರೆ.