ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತುರ್ತು ಸಭೆ ಕರೆದಿದ್ದಾರೆ.
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತುರ್ತು ಸಭೆ ಕರೆದಿದ್ದಾರೆ.
ಯಮುನಾ ನದಿಯ ನೀರಿನ ಮಟ್ಟ ಸಾರ್ವಕಾಲಿಕ ದಾಖಲೆ ಮಟ್ಟವನ್ನು (207.55 ಮೀಟರ್) ತಲುಪಿದೆ. ಈ ಮೂಲಕ 45 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. 1978ರಲ್ಲಿ ನೀರಿನ ಮಟ್ಟ 207.49 ಮೀಟರ್ ತಲುಪಿತ್ತು ಎಂದು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಹೇಳಿದೆ.
ಯಮುನಾ ನದಿ ನೀರಿನ ಮಟ್ಟ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹ ಸೇರಿದಂತೆ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿದ್ದೇವೆ ಎಂದು ಲೋಕೋಪಯೋಗಿ ಸಚಿವೆ ಅತಿಶಿ ತಿಳಿಸಿದ್ದಾರೆ.