ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ಸಂದರ್ಭ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇವರಿಂದ `ಭೀಷ್ಮಪ್ರತಿಜ್ಞೆ' ಯಕ್ಷಗಾನ ತಾಳಮದ್ದಳೆ ಜರಗಿತು. ಹಿಮ್ಮೇಳದಲ್ಲಿ ರಮೇಶ್ ಭಟ್ ಪುತ್ತೂರು, ಲವ ಕುಮಾರ್ ಐಲ, ಮುರಳೀಧರ ಕಲ್ಲೂರಾಯ ಕುಂಜೂರು ಪಂಜ, ಮುಮ್ಮೇಳದಲ್ಲಿ ಕುಂಬ್ಳೆ ಶ್ರೀಧರ ರಾವ್, ಗುಂಡ್ಯಡ್ಕ ಈಶ್ವರ ಭಟ್, ಭಾಸ್ಕರ ಬಾರ್ಯ, ಭಾಸ್ಕರ ಶೆಟ್ಟಿ ಸಾಲ್ಮರ ಪಾತ್ರ ನಿರ್ವಹಣೆ ಮಾಡಿದರು.