ಹೈದರಾಬಾದ್: 2024ರ ಲೋಕಸಭೆ ಮತ್ತು ವರ್ಷಾಂತ್ಯದಲ್ಲಿ ಕೆಲವು ರಾಜ್ಯಗಳ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ತೆಲಂಗಾಣದ ಹೈದರಾಬಾದ್‌ನಲ್ಲಿ ಪಕ್ಷದ ಪ್ರಾದೇಶಿಕ ಸಲಹಾ ಸಭೆ ನಡೆಯಿತು.

ದಕ್ಷಿಣ ರಾಜ್ಯಗಳ ಪಕ್ಷದ ಹಿರಿಯ ನಾಯಕರು ಸೇರಿದಂತೆ 12 ರಾಜ್ಯಗಳ ಘಟಕದ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡು ಚುನಾವಣೆ ಎದುರಿಸುವ ರೂಪುರೇಷೆ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಪಕ್ಷದ ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಸೇರಿದಂತೆ ಸಂಸದರು, ಶಾಸಕರು ಪಾಲ್ಗೊಂಡಿದ್ದರು.