ಇಂಫಾಲ: ಮಣಿಪುರ ಹಿಂಸಾಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆ. ರಾಜ್ಯದ ಹಿಂಸಾಚಾರ ಪರಿಸ್ಥಿತಿಯ ಬಗ್ಗೆ ಸಂಸತ್ತಿನಲ್ಲಿ ಮಾತನಾಡಬೇಕೆಂದು ಒತ್ತಾಯಿಸಿ ಇಂಫಾಲದಲ್ಲಿರುವ ಕೇಂದ್ರ ಸಚಿವ ಆರ್ ಕೆ ರಂಜನ್ ಸಿಂಗ್ ಅವರ ನಿವಾಸದ ಮೇಲೆ ಮಹಿಳಾ ಪ್ರತಿಭಟನಾಕಾರರು ಕಲ್ಲು ತೂರಿದ್ದಾರೆ.

ಎರಡು ತಿಂಗಳ ಅವಧಿಯಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರ ಮನೆ ಮೇಲೆ ನಡೆದಿರುವ ಎರಡನೇ ದಾಳಿ ಇದಾಗಿದೆ.
'ರಾಜ್ಯದ ಪರಿಸ್ಥಿತಿಯ ಬಗ್ಗೆ ಸಚಿವರು ಸಂಸತ್ತಿನಲ್ಲಿ ಮಾತನಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ನಾವು ಇಂಟರ್ನೆಟ್ ಸೇವೆಗಳನ್ನು ಮರಳಿ ಪಡೆಯಲು ಬಯಸುತ್ತೇವೆ. ನಮಗೆ ಏನಾಗುತ್ತಿದೆ ಎಂಬುದನ್ನು ದೇಶದ ಜನರಿಗೆ ಹೇಳಲು ಬಯಸುತ್ತೇವೆ' ಎಂದು ಪ್ರತಿಭಟನಾಕಾರರೊಬ್ಬರು ಹೇಳಿದರು.
ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗೆ ಒತ್ತಾಯಿಸಿ ಮಣಿಪುರ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕೂಡ ಇಂದು ರ್‍ಯಾಲಿ ನಡೆಸಿದರು. ಯುವಕರು ರ್‍ಯಾಲಿಗೆ ಅನುಮತಿ ಇಲ್ಲದ ಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ಕಿರುಕುಳ ನೀಡಿದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.