ಕುಂಬಳೆ : ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಬಂಬ್ರಾಣ ಕಲ್ಯಾಳ ನಿವಾಸಿ ಲೋಕೇಶ್ ಎಂಬವರ ಪುತ್ರ ರಾಜೇಶ್(28)ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಸಾರಣೆ ಕೆಲಸ ನಿರ್ವಹಿಸುತ್ತಿದ್ದ ಇವರು, ಸೋಮವಾರ ಸಂಜೆ 5.30ಕ್ಕೆ ಮನೆಯಿಂದ ಹೊರಟಿದ್ದು, ಬಹಳ ಹೊತ್ತಿನ ವರೆಗೆ ವಾಪಸಾಗದ ಹಿನ್ನೆಲೆಯಲ್ಲಿ ಮನೆಯವರು ಮೊಬೈಲ್‍ಗೆ ಕರೆಮಾಡಿದ್ದಾರೆ. ಈ ಸಂದರ್ಭ ಮೊಬೈಲ್ ಸ್ವಿಚ್‍ಆಫ್ ಆಗಿದ್ದು, ವಿವಿಧೆಡೆ ಹುಡುಕಾಡಿದರೂ ಪ್ರಯೋಜನವಾಗದಿದ್ದಾಗ ಸಹೋದರ ಶುಭಂ ಪೊಲೀಸರಿಗೆ ದೂರು ನೀಡಿದ್ದಾರೆ. ಕೇಸು ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟದಲ್ಲಿ ನಿರತರಾಗಿದ್ದಾರೆ.