ಕಾಸರಗೋಡು: ಕಳೆದೆರಡು ದಿವಸಗಳಿಂದ ಕಾಸರಗೋಡು ಸೇರಿದಂತೆ ರಜ್ಯಾದ್ಯಂತ ಬಿರುಸಿನ ಮಳೆಯಾಗುತ್ತಿದೆ. ಕೇಂದ್ರ ಹವಾಮಾನ ಇಲಾಖೆ ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ ಐದು ದಿವಸಗಳ ಕಾಲ ಕೆಲವು ಪ್ರದೇಶಗಳಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ª 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ.ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು, ಮಲೆನಡುಪ್ರದೇಶಗಳಲ್ಲಿ ಭೂಕುಸಿತ, ಮಣ್ಣು ಕುಸಿತಕ್ಕೂ ಕಾರಣವಾಗಿದೆ. ಬಿರುಸಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗ್ರತೆ ಪಾಲಿಸುವಂತೆ ಸೂಚಿಸಲಾಗಿದೆ.
ಭೂಕುಸಿತ ಮತ್ತು ಹಠಾತ್ ಪ್ರವಾಹಕ್ಕೆ ಒಳಗಾಗಬಹುದದ ಮಲೆನಾಡು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಬಲವಾದ ಗಾಳಿಯ ಸಾಧ್ಯತೆಯ ಕಾರಣ, ದುರ್ಬಲ ಛಾವಣಿಯಿರುವ ಮನೆಗಳಲ್ಲಿ ವಾಸಿಸುವವರು ವಿಶೇಷವಾಗಿ ಜಾಗ್ರತೆ ಪಾಲಿಸಬೇಕು. ಅಪಾಯ ಎದುರಿಸುತ್ತಿರುವವರು ಅಧಿಕಾರಿಗಳನ್ನು ಸಂಪರ್ಕಿಸಿ ಸುರಕ್ಷತಾ ಮುನ್ನೆಚ್ಚರಿಕೆಯನ್ವಯ ಸುರಕ್ಷಿತ ಜಾಗಗಳಿಗೆ ಸ್ಥಳಾಂತರಗೊಳ್ಳಬೇಕು ಎಂಬುದಾಗಿ ಸೂಚಿಸಲಾಗಿದೆ.