ಮಂಜೇಶ್ವರ: ಗುರುಪೂರ್ಣಿಮೆಯ ಅಂಗವಾಗಿ ದೇಶಿಯ ಅಧ್ಯಾಪಕ ಪರಿಷತ್ ಮಂಜೇಶ್ವರ ಉಪಜಿಲ್ಲೆಯ ವತಿಯಿಂದ ಗುರುವಂದನಾ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಂಗವಾಗಿ ಎಸ್.ಆರ್.ಎ. ಯು.ಪಿ ಎಸ್ ಕುಬಣೂರು ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಶೆಟ್ಟಿ ಅವರನ್ನು ಅವರ ಸ್ವಗೃಹದಲ್ಲಿ ಶಾಲು ಹೊದಿಸಿ ಹಣ್ಣು ಹಂಪಲು ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಜಿಲ್ಲಾ ಸದಸ್ಯ ಸತೀಶ್ ಶೆಟ್ಟಿ ಒಡ್ಡಂಬೆಟ್ಟು ಮಾತನಾಡಿ ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಎನ್.ಟಿ.ಯು ರಾಜ್ಯ ಉಪಾಧ್ಯಕ್ಷ ವೆಂಕಪ್ಪ ಶೆಟ್ಟಿ, ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಆರ್.ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಸ್.ಆರ್.ಎ. ಯು.ಪಿ ಶಾಲೆಯ ಸಂಚಾಲಕಿ ಮೋಕ್ಷದ ಶೆಟ್ಟಿ ಉಪಸ್ಥಿತರಿದ್ದರು. ಅಧ್ಯಾಪಕ ಪರಿಷತ್ ರಾಜ್ಯ ಸದಸ್ಯ ಅರವಿಂದಾಕ್ಷ ಭಂಡಾರಿ ಸ್ವಾಗತಿಸಿ, ಉಪಜಿಲ್ಲಾ ಕಾರ್ಯದರ್ಶಿ ದಯಾನಂದ ವಂದಿಸಿದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಉಪಜಿಲ್ಲಾ ಸದಸ್ಯರು ಭಾಗವಹಿಸಿದ್ದರು.