ಭೋಪಾಲ್: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹವಾಮಾನ ವೈಪರೀತ್ಯದಿಂದಾಗಿ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಸೋನಿಯಾ ಮತ್ತು ರಾಹುಲ್ ಬೆಂಗಳೂರಿನಿಂದ ದೆಹಲಿಗೆ ಹಿಂತಿರುಗುತ್ತಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಇಬ್ಬರೂ ನಾಯಕರು ಪ್ರಸ್ತುತ ಭೋಪಾಲ್ ವಿಮಾನ ನಿಲ್ದಾಣದ ವಿಐಪಿ ಲಾಂಜ್‌ನಲ್ಲಿ ತಂಗಿದ್ದಾರೆ. ನಂತರ ಇಂಡಿಗೋ ವಿಮಾನದಲ್ಲಿ ರಾತ್ರಿ 9:30ಕ್ಕೆ ದೆಹಲಿಗೆ ತೆರಳಬಹುದು ಎಂದು ಹೇಳಲಾಗುತ್ತಿದೆ.
ವಾಸ್ತವವಾಗಿ ಭೋಪಾಲ್‌ನಲ್ಲಿ ಹವಾಮಾನವು ತುಂಬಾ ಕೆಟ್ಟದಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆಯ ಕಾರಣ, ಮುಂದಿನ 24 ಗಂಟೆಗಳಲ್ಲಿ ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆ ಮುಂದುವರಿದಿದೆ. ಸದ್ಯಕ್ಕೆ ಹವಾಮಾನ ವೈಪರೀತ್ಯದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.