ಬದಿಯಡ್ಕ: ಮಾನ್ಯ ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಉದ್ಯಮಿ ಮಧುಸೂದನ ಆಯರ್ ಮಂಗಳೂರು ಇವರನ್ನು ಭೇಟಿಯಾಗಿ ಶ್ರೀ ಕ್ಷೇತ್ರಕ್ಕೆ ಆಮಂತ್ರಿಸಲಾಯಿತು. ಕ್ಷೇತ್ರ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ವಿವರಿಸಿ ವಿಜ್ಞಾಪನ ಪತ್ರವನ್ನು ನೀಡಲಾಯಿತು. ಧಾರ್ಮಿಕ ಕಾರ್ಯಗಳಿಗೆ ಸದಾ ಬೆಂಬಲವನ್ನು ನೀಡುತ್ತಿರುವ ಅವರು ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಗಳಿಗೆ ಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನಿತ್ತರು. ಪ್ರಥಮ ಹಂತದ ದೇಣಿಗೆಯನಿತ್ತು ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕುಂಜ, ಪದಾಧಿಕಾರಿಗಳಾದ ಸುಂದರ ಶೆಟ್ಟಿ ಕೊಲ್ಲಂಗಾನ, ನವೀನ್ ಚಂದ್ರ ಕಾರ್ಮಾರು, ನಾರಾಯಣ ಉಳ್ಳೋಡಿ, ದಾಮೋದರನ್ ಚೇಡಿಕಾನ ಜೊತೆಗಿದ್ದರು.