ರಾಂಚಿ : ಜಾರ್ಖಂಡ್‌ನ ಲೋಹರ್ದಗಾ ಜಿಲ್ಲೆಯಲ್ಲಿ ಐವರು ಮಾವೊವಾದಿಗಳನ್ನು ಬಂಧಿಸಿ, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸೆರೆನ್‌ದಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ ಮತ್ತು ಗುತ್ತಿಗೆದಾರರೊಬ್ಬರ ಕ್ಲರ್ಕ್ ಮೇಲೆ ದಾಳಿ ನಡೆಸಿದ ಪ್ರಕರಣಗಳಲ್ಲಿ ಬಂಧಿತರು ಶಾಮೀಲಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.