ನವದೆಹಲಿ: ಭಾರಿ ಮಳೆಯಿಂದಾಗಿ ಉತ್ತರ ಭಾರತ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ರೈಲುಗಳ ಸಂಚಾರ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿವೈಷ್ಣವ್ ಮಂಗಳವಾರ ಸಭೆ ನಡೆಸಿ ಪರ್ಯಾಲೋಚಿಸಿದರು.

ಈ ಸಂಬಂಧ 'ರೇಲ್ ಭವನ'ದಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಗೆ ಭೇಟಿ ನೀಡಿದ ಸಚಿವ ವೈಷ್ಣವ್, ಪರಿಸ್ಥಿತಿ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.