ಬೆಂಗಳೂರು: ಖ್ಯಾತ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ)ಯ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್ ಅವರಿಗೆ ಕೊಲಂಬೊದಲ್ಲಿ ಸೋಮವಾರ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.
83 ವರ್ಷದ ಕಸ್ತೂರಿರಂಗನ್ ಅವರನ್ನು ವಿಮಾನದ ಮೂಲಕ ಕೊಲಂಬೊದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಸಂಜೆ 5.30ಕ್ಕೆ ಎಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ಝೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಅವರನ್ನು ದಾಖಲಿಸಲಾಗುತ್ತಿದೆ.
ಶ್ರೀಲಂಕಾಕ್ಕೆ ತೆರಳಿದ್ದ ಸಮಯದಲ್ಲಿ ಕಸ್ತೂರಿರಂಗನ್ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಸ್ತೂರಿರಂಗನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್ ಮಾಡಲಾಗುತ್ತಿದ್ದು, ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಅವರು ಚಿಕಿತ್ಸೆ ನೀಡಲಿದ್ದಾರೆ.