ಕಾಸರಗೋಡು: ಜಿಲ್ಲಾ ಪಂಚಾಯಿತಿ, ಜಿಲ್ಲಾ ಸಾಕ್ಷರತಾ ಮಿಷನ್, ಕೈಟ್ ಮತ್ತು ಸಥಳೀಯಾಡಳಿತ ಸಂಸ್ಥೆಗಳ ಸಹಯೋಗದಲ್ಲಿ ಜಂಟಿಯಾಗಿ ನಡೆಸುತ್ತಿರುವ ಜಿಲ್ಲಾ ಸಂಪೂರ್ಣ ಡಿಜಿಟಲ್ ಸಾಕ್ಷರತಾ ಯೋಜನೆಯ ಜಿಲ್ಲಾ ಮಟ್ಟದ ಪ್ರವೇಶೋತ್ಸವ ಜುಲೈ 20ರಂದು ಬೆಳಿಗ್ಗೆ 11ಕ್ಕೆ ತ್ರಿಕರಿಪುರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಶಾಸಕ ಎಂ.ರಾಜಗೋಪಾಲನ್ ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಜನ ಪ್ರತಿನಿಧಿಗಳು, ಸಾಮಾಜಿಕ-ಸಾಂಸ್ಕøತಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮುಂತಾದವರು ಸಮಾರಂಭದಲ್ಲಿ ಭಾಗವಹಿಸುವರು.