ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.
ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.
ರಾಜಧಾನಿ ಇಂಫಾಲದಿಂದ 50 ಕಿ.ಮೀ ದೂರದಲ್ಲಿ ಘಟನೆ ನಡೆದಿದೆ. ಗುರುವಾರ ಬೆಳಿಗ್ಗೆ ಆರಂಭವಾದ ಗುಂಡಿನ ದಾಳಿ ಶುಕ್ರವಾರ ಬೆಳಗಿನ ಜಾವದವರೆಗೂ ಮುಂದುವರೆದಿತ್ತು.
ಘಟನೆ ನಡೆದ ಸುತ್ತಲಿನ ಪ್ರದೇಶಗಳಲ್ಲಿ ಡ್ರೋನ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ದುಷ್ಕರ್ಮಿಗಳು ಗಾಯಗೊಂಡಿದ್ದಾರೆಯೇ ಎನ್ನುವ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಮೈತೇಯಿ ಮತ್ತು ಕುಕಿ ಸಮುದಾಯದ ನಡುವಿನ ಸಂಘರ್ಷ ಹಲವು ಅಹಿತಕರ ಘಟನೆಗಳಿಗೂ ಕಾರಣವಾಗಿದ್ದು, ಈವರೆಗೆ 160ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.