ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠದಲ್ಲಿ ನಡೆಯುತ್ತಿರುವ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಶನಿವಾರ ಸಂಜೆ ಸಾಂಸ್ಕøತಿಕ ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಇವರ ಶಿಷ್ಯೆಯರಾದ ಡಾ. ಚಂದನಪ್ರಿಯ ಕಟೀಲು ಹಾಗೂ ಡಾ. ಸಾತ್ವಿಕ ಕೃಷ್ಣ ಬಿ. ಇವರಿಂದ ಭರತನಾಟ್ಯ ಪ್ರದರ್ಶನಗೊಂಡಿತು.