ಜಮ್ಮು : ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಇಲ್ಲಿಯ ರಾಂಬನ್ ರಾಷ್ಟ್ರೀಯ ಹೆದ್ದಾರಿಯ ಪರಿಸ್ಥಿತಿ ಹದಗೆಟ್ಟಿದ್ದು ಭಾನುವಾರ ಮರುಆರಂಭಗೊಂಡಿದ್ದ ಅಮರನಾಥ ಯಾತ್ರೆಯನ್ನು ಸೋಮವಾರ ಮತ್ತೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಗವತಿ ಕ್ಯಾಂಪ್‌ನಲ್ಲಿ 6 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಹಾಗೂ ಚಂದೆರಕೋಟ್ ಕ್ಯಾಂಪ್‌ನಲ್ಲಿ 5 ಸಾವಿರ ಯಾತ್ರಿಕರು ಸಿಲುಕಿಕೊಂಡಿದ್ದಾರೆ.
ಒಟ್ಟು 90 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥದ ಗುಹಾ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. 40 ಸಾವಿರಕ್ಕೂ ಹೆಚ್ಚು ಭಕ್ತರು ಶನಿವಾರ ಯಾತ್ರೆಯನ್ನು ಸ್ಥಗಿತಗೊಳಿಸುವ ಮೊದಲು ಏಳು ತಂಡಗಳಲ್ಲಿ ಜಮ್ಮುವಿನಿಂದ ಕಾಶ್ಮೀರಕ್ಕೆ ತೆರಳಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.