ಲಖನೌ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಅವರು ಈಚೆಗೆ ದೆಹಲಿ ಮತ್ತು ಇತರೆಡೆಗಳಲ್ಲಿ ನೀಡಿರುವ ಹೇಳಿಕೆಗಳು ನೋವುಂಟು ಮಾಡಿದ್ದು, ಈ ಕಾರಣಕ್ಕೆ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ನಾಲ್ವರು ಆರೋಪಿಗಳು ತಿಳಿಸಿರುವುದಾಗಿ ಪೊಲೀಸರು ಭಾನುವಾರ ಹೇಳಿದ್ದಾರೆ.

ಆಜಾದ್ ಅವರ ಯಾವ ಹೇಳಿಕೆಯ ಕಾರಣಕ್ಕೆ ದಾಳಿ ನಡೆಸಿದ್ದಾರೆ ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ.
ಉತ್ತರಪ್ರದೇಶದ ದೇವಬಂದ್‌ನಲ್ಲಿ ಆಜಾದ್ ಅವರು ಸಂಚರಿಸುತ್ತಿದ್ದ ವಾಹನದ ಮೇಲೆ ಈಚೆಗೆ ಗುಂಡಿನ ದಾಳಿ ನಡೆದಿದ್ದು, ಅವರು ಗಾಯಗೊಂಡಿದ್ದರು.
ಈ ಸಂಬಂಧ ದೇವಬಂದ್‌ನ ರಣಖಂಡಿ ನಿವಾಸಿಗಳಾದ ವಿಕಾಸ್ ಅಲಿಯಾಸ್ ವಿಕ್ಕಿ, ಪ್ರಶಾಂತ್ ಮತ್ತು ಲವೀಶ್ ಹಾಗೂ ಹರಿಯಾಣದ ಕರ್ನಾಲ್ ಜಿಲ್ಲೆಯ ವಿಕಾಸ್ ಎಂಬುವವರನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಎರಡು ನಾಡ ಪಿಸ್ತೂಲು ಮತ್ತು ಮದ್ದುಗುಂಡುಗಳನ್ನು ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಜಾದ್ ಅವರು ಪಾಲ್ಗೊಳ್ಳುವ ಕಾರ್ಯಕ್ರಮದ ಮಾಹಿತಿ ಕಲೆಹಾಕಿದ್ದ ಆರೋಪಿಗಳು ಅವರ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದ್ದರು ಎಂದೂ ವಿವರಿಸಿದ್ದಾರೆ.