ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ವಿವಿಧೆಡೆ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು, ಬಿರುಸಿನ ಮಳೆಗೆ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಪ್ರಯಾಣ ದುಸ್ತರವೆನಿಸಿದೆ.
ಹೆದ್ದಾರಿ ಷಟ್ಪಥ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಕಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೇ ಪಥದಲ್ಲಿ ವಾಹನಗಳು ಸಂಚರಿಸುತ್ತಿದ್ದು, ಒಂದೇ ಪಾಸ್ರ್ವದಲ್ಲಿ ಸಂಚರಿಸುತ್ತಿರುವುದರಿಂದ ರಸ್ತೆಯಲ್ಲಿ ಹೊಂಡಗಳೆದ್ದು, ಅಪಾಯ ಅಹ್ವಾನಿಸುತ್ತಿದೆ.
ಹಲವೆಡೆ ವಾಹನಗಳು ಇನ್ನೊಂದು ಪಾಶ್ರ್ವಕ್ಕೆ ತೆರಳಬೇಕದರೆ, ಹಲವು ಕಿ.ಮೀ ವರೆಗೆ ಸಂಚರಿಸಬೇಕಾಗುತ್ತಿದೆ. ಇದನ್ನು ತಪ್ಪಿಸಲು ಕೆಲವು ವಆಹನಗಳು ಏಕಮುಖ ಸಂಚಾರವಿರುವ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಸಾಗಿ ಇತರ ವಹನಗಳಿಗೂ ಅಪಾಯ ತಂದೊಡ್ಡುತ್ತಿದೆ.
ದ್ವಿಚಕ್ರ ವಾಹನಗಳಿಂದಲೂ ದೊಡ್ಡ ವಾಹನಗಳಿಗೆ ಸಮಸ್ಯೆಯುಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸಂಚಾರವನ್ನು ಗಣನೀಯವಗಿ ಕಡಿತಗೊಳಿಸುವಂತೆ ಹಾಗೂ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಸೂಚನೆ ನೀಡಿದರು. ನಿರಂತರ ಮಳೆಯಗುತ್ತಿರುವ ಹಿನ್ನೆಲೆಯಲ್ಲಿ ಮೊಗ್ರಾಲ್‍ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪರಮಾಣದಲ್ಲಿ ನೀರು ದಾಸ್ತಾನುಗೊಂಡಿದ್ದು, ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗುತ್ತಿದೆ. ರಸ್ತೆಬದಿ ಸಂಚರಿಸುವ ಪಾದಚಾರಿಗಳ ಮೇಲೆ ಕೆಸರಿನ ಸಿಂಚನವಾಗುತ್ತಿದೆ. ರಸ್ತೆಯ ನೀರು ಸರಾಗವಾಗಿ ಹರಿದುಹೋಗುವ ರೀತಿಯಲ್ಲಿ ಚರಂಡಿ ನಿರ್ಮಿಸುವಂತೆ ಸ್ಥಳೀಯರು ಮಾಡಿಕೊಂಡ ಮನವಿಗೂ ಬೆಲೆಯಿಲ್ಲದಾಗಿದೆ. ವಿದ್ಯಾನಗರ ವ್ಯಾಪ್ತಿಯಲ್ಲಿ ಹಲವೆಡೆ ದೊಡ್ಡ ಹೊಂಡಗಳಿದ್ದು, ಇವುಗಳಲ್ಲಿ ನೀರುತುಂಬಿಕೊಂಡು ಅಪಾಯ ಆಹ್ವಾನಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವೆಡೆ ಸರ್ವಿಸ್ ರಸ್ತೆಗಳಲ್ಲಿ ವಾಹನಗಳು ಸಂಚರಿಸುತ್ತಿದ್ದು, ರಸ್ತೆಯಲ್ಲಿ ಉಂಟಗಿರುವ ದೊಡ್ಡ ಹೊಂಡಗಳಿಂದ ಟ್ರಾಫಿಕ್ ಜಾಮ್‍ಗೂ ಕಾರಣವಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿನ ಇಂತಹ ಸಮಸ್ಯೆಗಳನ್ನು ಪರಿಹರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತುರ್ತು ಆದೇಶ ನೀಡಿದ್ದಾರೆ.