ಸಮರಸ ಚಿತ್ರಸುದ್ದಿ: ಪೆರ್ಲ: ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಗಾಗಿ ಸುಮಾರು 13ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕುಡಿಯುವ ನೀರಿನ ಟ್ಯಾಂಕ್‍ಗೆ ದೇಣಿಗೆಯಾಗಿ ಪೆರ್ಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಒಂದು ಲಕ್ಷ ರೂ. ಮೊತ್ತದ ಚೆಕ್ಕನ್ನು ಶ್ರೀ ಸತ್ಯನಾರಾಯಣ ಮಂದಿರದಲ್ಲಿ ಶಾಲಾ ಮುಖ್ಯ ಶಿಕ್ಷಕ ಬಿ. ರಾಜೇಂದ್ರ ಅವರಿಗೆ ಹಸ್ತಾಂತರಿಸಲಾಯಿತು. ಶಾಲಾ ಆಡಳಿತ ಸಮಿತಿ ಉಪಾಧ್ಯಕ್ಷ ಸದಾಶಿವ ಭಟ್ ಹರಿನಿಲಯ, ಗಣೇಶೋತ್ಸವ ಸಮಿತಿ ಪದಾಧಿಕಾರಿಗಳಾದ ಶ್ರೀರಾಮ ಭಟ್, ಕೃಷ್ಣಪ್ಪ ಪೂಜಾರಿ, ಉದಯ ಚೆಟ್ಟಿಯಾರ್, ಟಿ. ಬಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.