ಗ್ವಾಲಿಯರ್ : (PTI): ಮಧ್ಯಪ್ರದೇಶದ ಗ್ವಾಲಿಯರ್‌ನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಿಂದ ಥಳಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕ ಭಾನುವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ವಾಲಿಯರ್ : (PTI): ಮಧ್ಯಪ್ರದೇಶದ ಗ್ವಾಲಿಯರ್‌ನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಿಂದ ಥಳಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕ ಭಾನುವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
8ನೇ ತರಗತಿ ವಿದ್ಯಾರ್ಥಿಯಾಗಿದ್ದ ಬಾಲಕ ಜುಲೈ 12ರಂದು ಹೋಮ್‌ವರ್ಕ್ ಮಾಡದೇ ಇದ್ದಿದ್ದರಿಂದ ಶಿಕ್ಷಕಿ ಬಾಲಕನಿಗೆ ಥಳಿಸುವುದರ ಜೊತೆಗೆ ಇತರ ಶಿಕ್ಷೆಯನ್ನು ನೀಡಿದ್ದರು.
ಬಾಲಕನ ಶವ ಪರೀಕ್ಷೆ ನಡೆಸಲಾಗುತ್ತಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಅಸ್ವಸ್ಥನಾದ ಮಗನಿಗೆ ಸರ್ಕಾರಿ ಆಸ್ಪತ್ರೆ ಬದಲಾಗಿ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸುವಂತೆ ಶಿಕ್ಷಕಿ ನಮ್ಮ ಮೇಲೆ ಒತ್ತಡ ಹೇರಿದ್ದರು. ಈ ಮೊದಲು ಕೂಡ ಶಿಕ್ಷಕಿ ಇದೇ ರೀತಿ ಮಗನಿಗೆ ಥಳಿಸಿದ್ದರು. ಆಗ ಶಾಲಾ ಆಡಳಿತ ಮಂಡಳಿ ಈ ರೀತಿ ಮುಂದೆ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದ್ದರು' ಎಂದು ಬಾಲಕನ ತಂದೆ ಕೋಕ್ ಸಿಂಗ್ ಚೌಹಾಣ್ ಆರೋಪಿಸಿದ್ದಾರೆ.