ಸಿಯಾಚಿನ್: ಸಿಯಾಚಿನ್ ಗ್ಲೇಸಿಯರ್ ನಲ್ಲಿ ನಡೆದ ಅಗ್ನಿ ಅವಗಢದಲ್ಲಿ ಸೇನಾಧಿಕಾರಿ ಸಾವನ್ನಪ್ಪಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ.
ಮುಂಜಾನೆ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸೇನಾ ಸಿಬ್ಬಂದಿಗಳಿಗೆ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡ ರೆಜಿಮೆಂಟಲ್ ವೈದ್ಯಕೀಯ ಅಧಿಕಾರಿ, ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರು ಗಂಭೀರ ಗಾಯಗಳಿಂದಾಗಿ ಮೃತಪಟ್ಟಿದ್ದಾರೆ. ಉಳಿದ ಮೂವರು ಸಿಬ್ಬಂದಿಗಳಿಗೆ ಹೊಗೆ ಉಸಿರಾಡುವಿಕೆ ಹಾಗೂ ಸೆಕೆಂಡ್ ಡಿಗ್ರಿ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆಯ್ತುತಿದ್ದಾರೆ.
ಗಾಯಗೊಂಡ ಯೋಧರನ್ನು ಏರ್ ಲಿಫ್ಟ್ ಮಾಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.