ಕೊಚ್ಚಿ: ವಯನಾಡ್‍ನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿಯಲ್ಲಿ ಇರಿಸಲಾಗಿದ್ದ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಅಲ್ಲಿನ ಸಿಬ್ಬಂದಿ ವಿರುದ್ಧದ ಪ್ರಕರಣದ ವಿಚಾರಣೆಗೆ ಕೇರಳ ಹೈಕೋರ್ಟ್ ತಡೆಹಿಡಿದಿದೆ.
ನ್ಯಾಯಮೂರ್ತಿ ರಾಜಾ ವಿಜಯರಾಘವನ್ ಅವರು ಕಳೆದ ವರ್ಷ ದಾಖಲಾಗಿದ್ದ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರ ನಾಲ್ವರು ಸಿಬ್ಬಂದಿ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದ್ದಾರೆ.
ಕಳೆದ ವರ್ಷ ಜೂನ್‍ನಲ್ಲಿ, ಸಿಪಿಐ(ಎಂ) ವಿದ್ಯಾರ್ಥಿ ಘಟಕವು ಪ್ರತಿಭಟನೆಯ ಸಂದರ್ಭದಲ್ಲಿ ಕಚೇರಿಯನ್ನು ಧ್ವಂಸಗೊಳಿಸಿತ್ತು ಮತ್ತು ನಂತರ ಮಹಾತ್ಮ ಗಾಂಧಿಯವರ ಭಾವಚಿತ್ರವನ್ನು ಅಪರಿಚಿತ ವ್ಯಕ್ತಿಗಳು ಹಾನಿಗೊಳಿಸಿದ್ದಾರೆ ಎಂದು ವಕೀಲರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಯಿತು. .
ಎಸ್‍ಎಫ್‍ಐ ಕಾರ್ಯಕರ್ತರ ಮೇಲೆ ಕಾಂಗ್ರೆಸ್ಸ್ ಆರೋಪ ಹೊರಿಸಿದರೆ, ರಾಹುಲ್ ಗಾಂಧಿ ಅವರ ವೈಯಕ್ತಿಕ ಸಿಬ್ಬಂದಿಯೇ ಮಹಾತ್ಮ ಗಾಂಧಿ ಅವರ ಫೆÇೀಟೋವನ್ನು ಹಾನಿಗೊಳಿಸಿದ್ದಾರೆ ಎಂದು ಕೇರಳದ ಆಡಳಿತಾರೂಢ ಸಿಪಿಐ(ಎಂ) ಆರೋಪಿಸಿತ್ತು.
ನ್ಯಾಯಾಲಯವು ಜುಲೈ 13 ರ ಆದೇಶದಲ್ಲಿ 2022 ರಲ್ಲಿ ದಾಖಲಾದ ಪ್ರಕರಣದಲ್ಲಿ ದೂರುದಾರರಿಗೆ ನೋಟಿಸ್ ಜಾರಿ ಮಾಡಿತು.
ಅರ್ಜಿದಾರರು ತಮ್ಮನ್ನು ಆರೋಪಿಗಳಾಗಿ ಸೇರಿಸಲಾಗಿದೆ ಎಂದು ಪ್ರತಿಪಾದಿಸಿದ್ದು, ಪೋಲೀಸರು ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಟಿ ಆಸಿಫ್ ಅಲಿ, ಕಚೇರಿಯಲ್ಲಿದ್ದ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಹಾನಿ ಮಾಡುವಲ್ಲಿ ನಾಲ್ವರು ಸಿಬ್ಬಂದಿಗಳ ಪಾತ್ರವನ್ನು ಯಾವುದೇ ಸಾಕ್ಷಿಗಳು ಹೇಳಿಲ್ಲ.
ಕಾಂಗ್ರೆಸ್ ನಾಯಕನ ವಿರುದ್ಧ ಎಸ್‍ಎಫ್‍ಐ ನಡೆಸಿದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದಾಗ ಈ ಘಟನೆ ವರದಿಯಾಗಿತ್ತು.