ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಆರಂಭಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿದೆ.
ರಾಹುಲ್ ಗಾಂಧಿ ಮನವಿ ಮೇರೆಗೆ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸೇರಿ ಇತರರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.
2019ರಲ್ಲಿ ಲೋಕಸಭೆಗೆ ನಡೆದ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು 2019ರ ಏಪ್ರಿಲ್ 13ರಂದು ಕೋಲಾರದಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, 'ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ' ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿತ್ತು. ಈ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು.