ನವದೆಹಲಿ: ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾದ ಸ್ಥಾನಗಳಲ್ಲೂ ಪರೋಕ್ಷವಾಗಿ ಪುರುಷರೇ ಅಧಿಕಾರ ಚಲಾಯಿಸುತ್ತಿದ್ದು, ಇದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನವದೆಹಲಿ: ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾದ ಸ್ಥಾನಗಳಲ್ಲೂ ಪರೋಕ್ಷವಾಗಿ ಪುರುಷರೇ ಅಧಿಕಾರ ಚಲಾಯಿಸುತ್ತಿದ್ದು, ಇದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ಕುರಿತು ಪಂಚಾಯತ್ ರಾಜ್ ಸಚಿವಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಅರ್ಜಿದಾರರಿಗೆ ಸೂಚಿಸಿತು.
ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಸುಧಾಂಶು ಧುಲಿಯಾ ಅವರಿದ್ದ ಪೀಠ ಅರ್ಜಿಯನ್ನು ಪರಿಶೀಲಿಸಿತು. 'ಮಹಿಳೆಯರಿಗೆ ಮೀಸಲಾತಿ ಕುರಿತು 30 ವರ್ಷದ ಹಿಂದೆಯೇ ಕಾಯ್ದೆಯಾಗಿದೆ. ಆದರೆ, ಪರಿಣಾಮಕಾರಿಯಾಗಿ ಜಾರಿ ಆಗುತ್ತಿಲ್ಲ' ಎಂದು ಅರ್ಜಿದಾರರು ಹೇಳಿದರು.
ಸರ್ಕಾರದ ಸಂಬಂಧಿಸಿದ ಇಲಾಖೆಗೆ ಈ ಕುರಿತು ಮನವಿಯನ್ನು ಸಲ್ಲಿಸಲಾಗಿದೆಯೇ ಎಂದು ಪ್ರಶ್ನಿಸಿದ ಪೀಠವು, ಈ ಅರ್ಜಿಯಲ್ಲಿ ಎತ್ತಲಾದ ವಿಷಯಕ್ಕೆ ಪರಿಹಾರ ಕಂಡುಕೊಳ್ಳುವ ಯಾವುದೇ ಉದ್ದೇಶವನ್ನು ಈ ಅರ್ಜಿಯು ಒಳಗೊಂಡಿಲ್ಲ ಎಂದು ಅಭಿಪ್ರಾಯಪಟ್ಟಿತು.