ನವದೆಹಲಿ: ನಿಗದಿತ ಅವಧಿಗೂ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ಆವರಿಸಿದ್ದು ರಾಜಸ್ತಾನ, ಪಂಜಾಬ್ ಮತ್ತು ಹರಿಯಾಣದ ಹಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ನವದೆಹಲಿ: ನಿಗದಿತ ಅವಧಿಗೂ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ಆವರಿಸಿದ್ದು ರಾಜಸ್ತಾನ, ಪಂಜಾಬ್ ಮತ್ತು ಹರಿಯಾಣದ ಹಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ಉತ್ತರ ಪ್ರದೇಶದ ಪೂರ್ವ ಮತ್ತು ಬಿಹಾರದ ದಕ್ಷಿಣ ಭಾಗವನ್ನು ಹೊರತುಪಡಿಸಿ ಮುಂಗಾರು ಸಾಮಾನ್ಯವಾಗಿರಲಿದೆ ಎಂದು ಶುಕ್ರವಾರ ಹವಾಮಾನ ಇಲಾಖೆ ತಿಳಿಸಿತ್ತು.
ಜೂನ್‌ನಲ್ಲಿ 16 ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳು ಮಳೆ ಕೊರತೆ ಎದುರಿಸಿದ್ದವು. ಈ ತಿಂಗಳಿನಲ್ಲಿ ಸರಾಸರಿಗಿಂತಲೂ ಕಡಿಮೆ ಮಳೆ ಸುರಿದಿದ್ದರಿಂದ ಬಿತ್ತನೆಗೆ ಹಿನ್ನಡೆಯಾಗಿತ್ತು. ಅದರಲ್ಲೂ ಬಿಹಾರ ಶೇ 69 ಮತ್ತು ಕೇರಳದಲ್ಲಿ ಶೇ 60ರಷ್ಟು ಮಳೆ ಕೊರತೆಯಾಗಿತ್ತು. ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಜಾರ್ಖಂಡ್, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಅನ್ನದಾತರು ಸಂಕಷ್ಟಕ್ಕೆ ತುತ್ತಾಗಿದ್ದರು.