ತಿರುವನಂತಪುರ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಇಂದು(ಶುಕ್ರವಾರ) ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದ್ದು, ಕೊಟ್ಟಾಯಂ, ಪತ್ತನಂತಿಟ್ಟ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.ಮಾಹಿಯ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿಗಳು ಸೂಚಿಸಿರುವಂತೆ ಅಂಗನವಾಡಿಗಳು, ಐಸಿಎಸ್ ಇ/ಸಿಬಿಎಸ್ ಇ ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯಿಸುತ್ತದೆ ಪೂರ್ವ ನಿಗದಿತ ಸಾರ್ವಜನಿಕ ಪರೀಕ್ಷೆಗಳಿಗೆ ರಜೆ ಅನ್ವಯಿಸುವುದಿಲ್ಲ.
ಪತ್ತನಂತಿಟ್ಟ ಜಿಲ್ಲೆಯ ಅಂಗನವಾಡಿಯಿಂದ ವೃತ್ತಿಪರ ಕಾಲೇಜುಗಳವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಶುಕ್ರವಾರ ರಜೆ ನೀಡಲಾಗಿದೆ. ಪೂರ್ವ ನಿಗದಿತ ಪಬ್ಲಿಕ್ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಕಣ್ಣೂರು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಶುಕ್ರವಾರ ರಜೆ ಇರುವುದಾಗಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶುಕ್ರವಾರ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಕಣ್ಣೂರು ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಬದಲಾಯಿಸಿದೆ. ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನೂ ಬದಲಾಯಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲೂ ರಜೆ ನೀಡಲಾಗಿದ್ದು, ಹೆಚ್ಚು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.