ನವದೆಹಲಿ: ಮಣಿಪುರ ಸಂಘರ್ಷಕ್ಕೆ ಸಂಬಂಧಿಸಿದಂತೆ ವಿಪಕ್ಷದವರು ಯಾಕೆ ಚರ್ಚೆಗೆ ಬರುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ಮಣಿಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.

ಮಣಿಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರಿಗೂ ನೋವಿದೆ, ಅದನ್ನು ಎಲ್ಲರೂ ವ್ಯಕ್ತಪಡಿಸಿದ್ದಾರೆ. ಆದರೆ ವಿರೋಧ ಪಕ್ಷದವರು ಮಣಿಪುರ ವಿಷಯಕ್ಕೆ ಸಂಬಂಧಪಟ್ಟಂತೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡಲು ಹಿಂಜರಿಯುತ್ತಿದ್ದಾರೆ ಎಂದು ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.
ಚರ್ಚೆ ಮಾಡಿ ಅಂತ ನಾವು ಪದೇಪದೆ ಕೇಳಿಕೊಳ್ಳುತ್ತಿದ್ದೇವೆ. ಆದರೆ ಅವರು ಚರ್ಚೆಯಿಂದ ಯಾಕೆ ಪಲಾಯನ ಮಾಡುತ್ತಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ಅವರ ತಂತ್ರ-ಯೋಚನೆ ಅರ್ಥ ಆಗುತ್ತಿಲ್ಲ. ರಚನಾತ್ಮಕ ಚರ್ಚೆಯಾದರೆ ಅದರಿಂದ ಏನಾದರೂ ಪ್ರಯೋಜನವಾಗುತ್ತದೆ, ಅವರು ಚರ್ಚೆಗೆ ಬರಲಿ ಎಂದು ಜೋಶಿ ಹೇಳಿದರು.