ತಿರುವನಂತಪುರಂ: ಬೀದಿ ನಾಯಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಪ್ರವೇಶಿಸಿದೆ. ಆಕ್ರಮಣಕಾರಿ ಬೀದಿ ನಾಯಿಗಳ ಪುನರ್ವಸತಿ, ಲಸಿಕೆ ಆಂದೋಲನದಂತಹ ವಿಷಯಗಳ ಕುರಿತು ಕ್ರಿಯಾ ಯೋಜನೆ ಜಾರಿಗೊಳಿಸದ ಸ್ಥಳೀಯಾಡಳಿತ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.
ಮಧ್ಯಂತರ ಆದೇಶದಲ್ಲಿ ನ್ಯಾಯಾಲಯವು ಲಸಿಕೆ ಸೇರಿದಂತೆ ಸ್ಥಳೀಯಾಡಳಿತ ಸಂಸ್ಥೆಗಳು ಕೈಗೊಂಡ ಕ್ರಮಗಳ ವಿವರಗಳನ್ನು ಸಲ್ಲಿಸುವಂತೆ ಸರ್ಕಾರವನ್ನು ಕೇಳಿದೆ. ಎ.ಕೆ.ಜಯಶಂಕರನ್ ನಂಬಿಯಾರ್ ಮತ್ತು ಗೋಪಿನಾಥ್ ಅವರಿದ್ದ ವಿಭಾಗೀಯ ಪೀಠ ಈ ಮಧ್ಯಂತರ ಆದೇಶ ನೀಡಿದೆ. ಕಳೆದ ಸೆಪ್ಟೆಂಬರ್‍ನಲ್ಲಿ ಸರ್ಕಾರ ಬೀದಿ ನಾಯಿಗಳ ಹಾವಳಿಯನ್ನು ಪರಿಹರಿಸುವ ಭಾಗವಾಗಿ ನಾಲ್ಕು ದಿನಗಳ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿತ್ತು.