ಕಾಸರಗೋಡು: ರಾಷ್ಟ್ರಕವಿ ಗೋವಿಂದ ಪೈಸ್ಮಾರಕ ಸಮಿತಿ ಸಭೆ ಕಾಸರಗೋಡು ಜಿಲ್ಲಾಧಿಕಾರಿ ಚೇಂಬರ್‍ನಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಉಮೇಶ್ ಸಾಲಿಯಾನ್ ವರದಿ ಮಂಡಿಸಿದರು. ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಅವರನ್ನು ಕಾರ್ಯದರ್ಶಿ ಉಮೇಶ್ ಸಾಲ್ಯಾನ್ ಅವರು ಪುಷ್ಪಗುಚ್ಛ ನೀಡಿ ಗೌರವಿಸಿದರು.
ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕದಲ್ಲಿನ ಭವನಿಕಾ ಸಭಾಂಗಣದ ಅಗ್ನಿ ಸುರಕ್ಷಾ ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ವಹಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಬಗ್ಗೆ ಸರ್ಕಾರದಿಂದ ಮಂಜೂರಾದ 57 ಲಕ್ಷ ರೂ. ಮೊತ್ತವನ್ನು ಈ ಅಭಿವೃದ್ಧಿಕಾರ್ಯಗಳಿಗೆ ವಿನಿಯೋಗಿಸಲು ತೀರ್ಮಾನಿಸಲಾಯಿತು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲೆವಿನೋ ಮೊಂತೆರೊ, ಹಣಕಾಸು ಅಧಿಕಾರಿ ಎಂ.ಶಿವಪ್ರಕಾಶನ ನಾಯರ್, ಜಿಲ್ಲಾ ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಇಂಜಿನಿಯರ್ ಸುಂದರೇಶನ್ ಸಮಿತಿ ಸದಸ್ಯ ಎಚ್. ವಾಸುದೇವ, ಆಶಾ ದಿಲೀಪ ಮತ್ತಿತರರು ಭಾಗವಹಿಸಿದ್ದರು.