ಪಾಲಕ್ಕಾಡ್: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಆಲತ್ತೂರು ತಾಲ್ಲೂಕಿನಲ್ಲಿ ನಡೆದಿದೆ.
ಪಾಲಕ್ಕಾಡ್: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಆಲತ್ತೂರು ತಾಲ್ಲೂಕಿನಲ್ಲಿ ನಡೆದಿದೆ.
ಮೃತರನ್ನು ಐಶ್ವರ್ಯ(29), ಅನುಗ್ರಹ(2), ಅರುಮೋಲ್(8 ತಿಂಗಳು) ಎಂದು ಗುರುತಿಸಲಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಆಲತ್ತೂರು ಪೊಲೀಸ್ ಠಾಣಾಧಿಕಾರಿ ಉನ್ನಿಕೃಷ್ಣನ್ ಮೂರು ವರ್ಷಗಳ ಹಿಂದೆ ಐಶ್ವರ್ಯಗೆ ರಂಜಿತ್ ಎಂಬುವವರ ಜೊತೆ ವಿವಾಹವಾಗಿತ್ತು. ಐಶ್ವರ್ಯ ಮತ್ತು ಮಕ್ಕಳಿಬ್ಬರನ್ನು ಆಕೆಯ ಮಾವ ಕೆಲ ದಿನಗಳ ಹಿಂದೆ ತವರು ಮನೆಗೆ ಬಿಟ್ಟು ಬಂದಿದ್ದರು.
ಪತಿ ರಂಜಿತ್ ಅನೇಕ ಬಾರಿ ಕರೆ ಮಾಡಿದ್ದರು ಸ್ವೀಕರಿಸದಿದ್ದಾಗ ಅನುಮಾನಗೊಂಡು ಐಶ್ವರ್ಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮನೆಯ ಸುತ್ತ ಹುಡುಕಾಟ ನಡೆಸಿದಾಗ ಬತ್ತದ ಗದ್ದೆಯಲ್ಲಿರುವ ಬಾವಿಯೊಂದರಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ಇಲಾಖೆ ಸಿಬ್ಬಂದಿ ನೆರವಿನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆಲತ್ತೂರು ಪೊಲೀಸ್ ಠಾಣಾಧಿಕಾರಿ ಉನ್ನಿಕೃಷ್ಣನ್ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.