ತಿರುವನಂತಪುರಂ: ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಬೇಕಿದ್ದ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ 2023ರ ಘೋಷಣೆಯನ್ನು ಮುಂದೂಡಲಾಗಿದೆ.
ಇದೇ ಶುಕ್ರವಾರ 21ರಂದು ಮಧ್ಯಾಹ್ನ 3 ಗಂಟೆಗೆ ಸೆಕ್ರೆಟರಿಯೇಟ್‍ನ ಪಿಆರ್ ಚೇಂಬರ್‍ನಲ್ಲಿ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಸಂಸ್ಕøತಿ ಸಚಿವ ಸಾಜಿ ಚೆರಿಯನ್ ಅವರು ಪ್ರಶಸ್ತಿಗಳನ್ನು ಪ್ರಕಟಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ರಾಜ್ಯದಲ್ಲಿ ಮೂರು ದಿನಗಳ ಅಧಿಕೃತ ಶೋಕಾಚರಣೆ ಘೋಷಿಸಲಾಗಿದೆ. ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಇಂದು ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಸಲಾಗಿತ್ತು. ನೆಗೋಶಿಯೇಬಲ್ ಇನ್‍ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ಇಂದು ರಜೆ ಘೋಷಿಸಲಾಗಿತ್ತು