ಚಂಡೀಗಢ: ಅವಿವಾಹಿತರಿಗೆ ಪಿಂಚಣಿ ನೀಡುವ ಯೋಜನೆಯನ್ನು ಜಾರಿಗೆ ತರುವುದಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
ಚಂಡೀಗಢ: ಅವಿವಾಹಿತರಿಗೆ ಪಿಂಚಣಿ ನೀಡುವ ಯೋಜನೆಯನ್ನು ಜಾರಿಗೆ ತರುವುದಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
ಸೋಮವಾರ ಕರ್ನಾಲ್ ಜಿಲ್ಲೆಯ ಕಲಂಪುರ್‌ದಲ್ಲಿ ನಡೆದ ಜನ ಸಂವಾದ ಕಾರ್ಯಕ್ರಮದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ.
45 ರಿಂದ 60 ವರ್ಷದೊಳಗಿನ ಅವಿವಾಹಿತರಿಗೆ ರಾಜ್ಯ ಸರ್ಕಾರದಿಂದ ಪಿಂಚಣಿ ಕೊಡುವ ಬಗ್ಗೆ ಚರ್ಚಿಸಲಾಗಿದೆ.
ಹರಿಯಾಣದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸಂಸ್ಕೃತಿ ಮಾದರಿ ಶಾಲೆ, ಪ್ರತಿ ಗ್ರಾಮಕ್ಕೂ ವೇಗದ ಇಂಟರ್‌ನೆಟ್ ಒದಗಿಸುವ ಯೋಜನೆಗಳನ್ನು ಹಾಕಿಕೊಂಡಿದ್ದೇವೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.
ಸದ್ಯ ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ವಿಶೇಷವೆಂದರೆ ಸಿಎಂ ಮನೋಹರ್ ಲಾಲ್ ಖಟ್ಟರ್ ಕೂಡ ಅವಿವಾಹಿತರಾಗಿದ್ದಾರೆ.