ಕಾಸರಗೋಡು: ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಾಳೆಯೂ ಭಾರೀ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ರಾಜ್ಯ ಪಠ್ಯಕ್ರಮ, ಸಿಬಿಎಸ್‍ಇ, ಐಸಿಎಸ್‍ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳಂತಹ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಜುಲೈ 5) ಜಿಲ್ಲಾಧಿಕಾರಿ ಕೆ.ಇಂನ್ಬಾಶೇಖರ್ ರಜೆ ಘೋಷಿಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ರಜೆಯಿಂದ ನಷ್ಟಗೊಂಡ ತರಗತಿಯನ್ನು ಮರು ಹೊಂದಿಸಲು ಕ್ರಮಕೈಗೊಳ್ಳಬೇಕು. ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿದೆ.