ನವದೆಹಲಿ: ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತು ಕೇಂದ್ರ ಸರ್ಕಾರವು ಹೊರಡಿಸಿರುವ ಸುಗ್ರೀವಾಜ್ಞೆ ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿಸಿದೆ.
ನವದೆಹಲಿ: ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತು ಕೇಂದ್ರ ಸರ್ಕಾರವು ಹೊರಡಿಸಿರುವ ಸುಗ್ರೀವಾಜ್ಞೆ ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿಸಿದೆ.
ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು, ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರಿದ್ದ ವಿಭಾಗೀಯ ಪೀಠಕ್ಕೆ ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಜುಲೈ 10ರಂದು ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.
ಸಾರ್ವಜನಿಕ ಭದ್ರತೆ, ಪೊಲೀಸ್(ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಭೂಮಿಗೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ ಇತರ ಎಲ್ಲಾ ಸೇವೆಗಳ ವಿಚಾರದಲ್ಲಿ ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರ ಹೊಂದಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದರ ವಿರುದ್ಧ ಕೇಂದ್ರವು ಸುಗ್ರೀವಾಜ್ಞೆ ಹೊರಡಿಸಿದೆ. ಇದು ನ್ಯಾಯಾಲಯ ಮತ್ತು ಸಂವಿಧಾನದ ಆಶಯಕ್ಕೆ ಬಗೆಯುವ ದ್ರೋಹವಾಗಿದೆ ಎಂದು ದೆಹಲಿ ಸರ್ಕಾರವು ಅರ್ಜಿಯಲ್ಲಿ ದೂರಿದೆ.