ಕುಂಬಳೆ: ಕುಂಬಳೆ ಶಾಂತಿಪಳ್ಳ ನಿವಾಸಿ ಕೇರಳ ಗ್ರಾಮೀಣ ಬ್ಯಾಂಕ್ ನಿವೃತ್ತ ಪ್ರಬಂಧಕ ನಾರಾಯಣ ಪೂಜಾರಿ-ನಿವೃತ್ತ ಮುಖ್ಯ ಶಿಕ್ಷಕಿ ಯಮುನಾ ದಂಪತಿ ಪುತ್ರ ಅನೂಪ್‍ರಾಜ್(41)ಶನಿವಾರ ಹೃದಯಾಘಾತದಿಂದ ನಿಧನರಾದರು.
ಎದೆನೋವು ಕಾಣಿಸಿಕೊಂಡ ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ. ಕುಂಬಳೆ ಪೇಟೆಯಲ್ಲಿ ವ್ಯಾಪಾರಿಯಾಗಿದ್ದರು. ಅವರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.