ಅಹಮದಾಬಾದ್: 'ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು' ಎಂದಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ.

2019ರಲ್ಲಿ ಕೋಲಾರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ 'ಮೋದಿ ಉಪನಾಮ ಹೊಂದಿರುವವರೆಲ್ಲಾ ಕಳ್ಳರು' ಎಂದು ರಾಹುಲ್ ಗಾಂಧಿ ಹೇಳಿದ್ದರು.
ಪ್ರಕರಣ ಸಂಬಂಧ ಗುಜರಾತ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ರಾಹುಲ್ ಗಾಂಧಿಯವರಿಗೆ 2 ವರ್ಷಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ರಾಹುಲ್‌ಗಾಂಧಿಯವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ: ಮೋದಿ ಉಪನಾಮ ಟೀಕೆ: ರಾಹುಲ್ ಗಾಂಧಿಗೆ 2 ವರ್ಷ ಜೈಲು
ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 2ರಂದೇ ವಿಚಾರಣೆ ಪೂರ್ಣಗೊಳಿಸಿದ್ದು ಆದೇಶವನ್ನು ಕಾಯ್ದಿರಿಸಿದ್ದರು. ಮಧ್ಯಂತರ ಪರಿಹಾರದ ಆದೇಶ ನೀಡಲು ನಿರಾಕರಿಸಿದ್ದರು. ಬೇಸಿಗೆ ರಜೆ ಮುಗಿದ ಬಳಿಕವೇ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.
ಶುಕ್ರವಾರ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಕೆಳ ನ್ಯಾಯಾಲಯ ನೀಡಿದ ತೀರ್ಪು ಸರಿಯಾಗಿದೆ. ತೀರ್ಪಿನಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಈ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ.