ಕಾಸರಗೋಡು: ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಸುರಕ್ಷಾ ವ್ಯವಸ್ಥೆಯನ್ವಯ ಕನಿಷ್ಠ ಭದ್ರತಾ ಕಾರ್ಯ ವಿಧಾನಗಳನ್ನು ಜಾರಿಗೊಳಿಸುವಂತೆ ಆರ್‍ಟಿಐ ಕಾರ್ಯಕರ್ತ ವಿ.ಶಿಲ್ಪರಾಜ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅಗ್ನಿಶಾಮಕ ರಕ್ಷಣಾ ವಿಭಾಗಕ್ಕೆ ಆರ್‍ಟಿಐ ಮೂಲಕ ಅರ್ಜಿ ಸಲ್ಲಿಸಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿನ ಕನಿಷ್ಠ ಭದ್ರತಾ ವ್ಯವಸ್ಥೆ ಬಗ್ಗೆ ಅಗ್ನಿಶಾಮಕ ದಳಕ್ಕಿರುವ ಮಾಹಿತಿ ಬಗ್ಗೆ ಆರ್‍ಟಿಐ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಸಂಬಂಧಿಸಿ ಲಭಿಸಿದ ಉತ್ತರ ತೀರಾ ನಿರಶಾದಾಯಕವಾಗಿದೆ. ಸಾವಿರಾರು ಮಂದಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವ ಸಂಸ್ಥೆಗಳಲ್ಲಿನ ಸುರಕ್ಷಾ ವ್ಯವಸ್ಥೆಯ ಬಗ್ಗೆ ಕನಿಷ್ಟ ಮಾಹಿತಿಯನ್ನೂ ಸಂಗ್ರಹಿಸಿಟ್ಟುಕೊಳ್ಳದಿರುವ ಅಗ್ನಿಶಾಮಕ ದಳದ ಕಾರ್ಯವೈಖರಿ ಆತಂಕಕಾರಿ ಎಂಬುದಾಗಿ ಶಿಲ್ಪರಾಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
. ಭದ್ರತಾ ಲೋಪವನ್ನು ಸ್ಪಷ್ಟಪಡಿಸುವ ದಾಖಲೆಗಳನ್ನು ಒಳಗೊಂಡಂತೆ 2023 ಜುಲೈ 10ರಂದು ಸಲ್ಲಿಸಿದ ದೂರಿನಲ್ಲಿ ಕಣ್ಣೂರು ಪ್ರಾದೇಶಿಕ ಅಗ್ನಿಶಾಮಕ ಕಚೇರಿ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಕನಿಷ್ಠ ಭದ್ರತಾ ವ್ಯವಸ್ಥೆಗಳನ್ನು ಸಿದ್ಧಪಡಿಸಲು ಸೂಕ್ತ ಕ್ರಮಕ್ಕೆ ಸೂಚಿಸಿದೆ. ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಸುರಕ್ಷೆಯ ಕನಿಷ್ಠ ವ್ಯವಸ್ಥೆ ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕಣ್ಣೂರು ಪ್ರಾದೇಶಿಕ ಅಗ್ನಿಶಾಮಕ ದಳ ಅಧಿಕಾರಿ ಕಾಸರಗೋಡು ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿಗಳಿಗೂ ಸೂಚಿಸಿದ್ದಾರೆ.