HEALTH TIPS

ಇನ್ನು ಸರ್ಕಾರಿ ನೌಕರರಿಗೆ ಸರ್ಕಾರಿ ಕೆಲಸ ಮಾತ್ರ: ಖಾಸಗಿ ಸಂಸ್ಥೆಗಳಲ್ಲಿ ಟ್ಯೂಷನ್, ಕೋಚಿಂಗ್ ನಡೆಸುವುದಕ್ಕೆ ನಿಷೇಧ

                  ತಿರುವನಂತಪುರಂ: ಉದ್ಯೋಗಿಗಳು ತಮ್ಮ ಬಿಡುವಿನ ವೇಳೆಯಲ್ಲಿ ಟ್ಯೂಷನ್ ಮತ್ತು ಕೋಚಿಂಗ್ ಸೆಂಟರ್ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಸೇವಾ ನಿಯಮಗಳಿಗೆ ತಿದ್ದುಪಡಿ ತಂದಿದೆ.

                    ಸರ್ಕಾರಿ ನೌಕರರು ಟ್ಯೂಷನ್ ಸೆಂಟರ್ ಮತ್ತು ಕೋಚಿಂಗ್ ಸೆಂಟರ್ ನಡೆಸುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಮುಂದೆ ಇಂತಹ ಘಟನೆಗಳು ಗಮನಕ್ಕೆ ಬಂದರೆ ಇಲಾಖಾ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು.

               ಆಡಳಿತ ಸುಧಾರಣಾ ಇಲಾಖೆಯು 2020 ರಲ್ಲಿ ಸುತ್ತೋಲೆಯನ್ನು ಹೊರಡಿಸಿತ್ತು. ಈಗ ಮತ್ತೊಮ್ಮೆ ಈ ಸುತ್ತೋಲೆಗೆ ಕಾನೂನು ಅನುಮೋದನೆ ನೀಡಲಾಗಿದೆ.  ಸರ್ಕಾರಿ ನೌಕರರು ನಿಗದಿತ ಸಂಭಾವನೆಗಾಗಿ ಖಾಸಗಿ ಟ್ಯೂಷನ್ ತರಗತಿಗಳನ್ನು ತೆಗೆದುಕೊಳ್ಳುತ್ತಿರುವುದು ವಿಜಿಲೆನ್ಸ್ ತನಿಖೆಯಲ್ಲಿ ಕಂಡುಬಂದಿದೆ. ಈ ಕುರಿತು ವಿಜಿಲೆನ್ಸ್ ನಿರ್ದೇಶಕರಿಗೆ ಹಲವು ದೂರುಗಳು ಬಂದಿದ್ದವು.

                   ಈ ನಿಟ್ಟಿನಲ್ಲಿ ರಾಜ್ಯದ ಹಲವೆಡೆ ತಪಾಸಣೆ ನಡೆಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಎರ್ನಾಕುಳಂ, ಪತ್ತನಂತಿಟ್ಟ, ಕೊಟ್ಟಾಯಂ, ಅಲಪ್ಪುಳ, ತ್ರಿಶೂರ್, ಪಾಲಕ್ಕಾಡ್ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ತಪಾಸಣೆ ನಡೆಸಲಾಗಿದೆ. ಶಿಕ್ಷಕರು ಮತ್ತು ಕೆಎಸ್‍ಆರ್‍ಟಿಸಿ ಕಂಡಕ್ಟರ್‍ಗಳು ಟ್ಯೂಷನ್ ತೆಗೆದುಕೊಳ್ಳುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries