ಚೆನ್ನೈ : ತಂಜಾವೂರು ಜಿಲ್ಲೆಯ ತಿರುಭುವನಂನಲ್ಲಿ 2019ರಲ್ಲಿ ನಡೆದಿದ್ದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಪದಾಧಿಕಾರಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ತಮಿಳುನಾಡಿನ ವಿವಿಧೆಡೆ ಶೋಧ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಟ್ಟಣದಲ್ಲಿ ನಡೆದಿದ್ದ ಮತಾಂತರದ ಬಗ್ಗೆ ರಾಮಲಿಂಗಂ ಪ್ರಶ್ನಿಸಿದ ಕೆಲವೇ ಗಂಟೆಗಳಲ್ಲಿ, ಗುಂಪೊಂದು ಅವರನ್ನು ಹತ್ಯೆಗೈದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಈಗಾಗಲೇ ಕೆಲವರನ್ನು ಬಂಧಿಸಿದ್ದು, ಇನ್ನೂ ಹಲವರು ತಲೆಮರೆಸಿಕೊಂಡಿದ್ದಾರೆ.
ಮದುರೈ, ತಂಜಾವೂರು, ತಿರುನಲ್ವೇಲಿ ಮತ್ತು ಮೈಲಾಡುತುರೈ ಜಿಲ್ಲೆ ಸೇರಿದಂತೆ ವಿವಿಧೆಡೆ ಎನ್‌ಐಎ ಶೋಧ ನಡೆಸಿದೆ ಎಂದು ಮೂಲಗಳು ತಿಳಿಸಿವೆ.