ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಬಗ್ಗೆ ಸದನದಲ್ಲಿ ಚರ್ಚೆ ನಡೆಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಶುಕ್ರವಾರ ಟಿಎಂಸಿ ಸದಸ್ಯ ಡೆರಿಕ್ ಒಬ್ರಿಯಾನ್ ಮತ್ತು ಸಭಾಪತಿ ಜಗದೀಪ್ ಧನಕರ್ ನಡುವೆ ಮಾತಿನ ಚಕಮಕಿ ನಡೆಯಿತು.
ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಬಗ್ಗೆ ಸದನದಲ್ಲಿ ಚರ್ಚೆ ನಡೆಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಶುಕ್ರವಾರ ಟಿಎಂಸಿ ಸದಸ್ಯ ಡೆರಿಕ್ ಒಬ್ರಿಯಾನ್ ಮತ್ತು ಸಭಾಪತಿ ಜಗದೀಪ್ ಧನಕರ್ ನಡುವೆ ಮಾತಿನ ಚಕಮಕಿ ನಡೆಯಿತು.
ನಿಯಮ 267ರ ಅಡಿಯಲ್ಲಿ ಮಣಿಪುರದಲ್ಲಿನ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳ ಸದಸ್ಯರು ನೀಡಿದ ನೋಟಿಸ್ ಸ್ವೀಕರಿಸದಿರುವ ಬಗ್ಗೆ ಪ್ರಸ್ತಾಪಿಸುವಾಗ ಒಬ್ರಿಯಾನ್ ಅವರು ಮೇಜು ಕುಟ್ಟಿ, ಸಭಾಪತಿ ಅವರೊಂದಿಗೆ ವಾಗ್ವಾದಕ್ಕೆ ಇಳಿದರು.
ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ, ಎಸ್‌ಪಿ, ಎಎಪಿ, ಎನ್‌ಸಿಪಿ ಮತ್ತು ಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳ 47 ಸಂಸದರು ಶುಕ್ರವಾರ ನೋಟಿಸ್ ನೀಡಿದ್ದರು. ಪಟ್ಟಿ ಮಾಡಿರುವ ವಿಷಯಗಳನ್ನು ಬದಿಗಿರಿಸಿ, ಮಣಿಪುರ ವಿಷಯ ಚರ್ಚೆಗೆ ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದರು.